CLICK HERE ವಿಕಲಚೇತನ App

ಪ್ರತಿಭಾವಂತ ವಿಕಲಚೇತನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆ ಪ್ರಕ್ರಿಯೆ


ಪ್ರತಿಭಾವಂತ ವಿಕಲಚೇತನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆ

ಈ ಸೇವೆ ಪಡೆಯಲು ಅರ್ಹತೆಗಳು

1 ಕನಿಷ್ಠ 40% ವಿಕಲಚೇತನತೆ ಹೊಂದಿರಬೇಕು
2. ಹಿಂದಿನ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
3. ವಿದ್ಯಾರ್ಥಿಯು ವ್ಯಾಸಂಗ ಮಾಡುತ್ತಿರುವ ಶಾಲೆ/ಕಾಲೇಜು ಮುಖ್ಯಸ್ಥರು ಶಿಫಾರಸ್ಸು ಮಾಡಬೇಕು


ದಾಖಲೆಗಳ ವಿವರಗಳು
1. ಅಂಕ ಪಟ್ಟಿ
2. ಆಧಾರ್ ಕಾರ್ಡ್
3. ವಿಕಲಚೇತನರ ಗುರುತಿನ ಚೀಟಿ
4. ಶಾಲೆಯ ಮುಖ್ಯೋಪಧ್ಯಾಯರು/ ಕಾಲೇಜಿನ ಪ್ರಾಂಶುಪಾಲರಿಂದ ವಿದ್ಯಾರ್ಥಿಯ ಬಗ್ಗೆ ದೃಢೀಕರಣ


ಪ್ರಕ್ರಿಯೆ
1. ಅರ್ಜಿದಾರರು ಇಲಾಖೆಯ ಅಧಿಕೃತ ವೆಬ್ ಸೈಟ್ ನಲ್ಲಿ ಲಾಗ್ ಇನ್ ಆಗುವುದು
2. ಮುಖ್ಯೋಪಾಧ್ಯಾಯರು ಮುಖಪುಟದಲ್ಲಿರುವ ಮುಖ್ಯೋಪಾಧ್ಯಾಯರ/ಪ್ರಾಂಶುಪಾಲರ ಘೋಷಣ ಪತ್ರವನ್ನು ಡೌನ್ಲೋಡ್ ಮಾಡಿ ವಿವರಗಳನ್ನು ಬರೆದು ದಾಖಲೆಗಳನ್ನು ಅಪ್ಲೋಡ್ ಮಾಡಬೇಕಾಗಿದ್ದು, ಸಹಿ ಕಡ್ಡಾಯವಾಗಿರುತ್ತದೆ.
3. ನ೦ತರ, ಅರ್ಜಿದಾರರು ತಮ್ಮ ವ್ಯಯಕ್ತಿಕ ಮೊಬೈಲ್ ಸಂಖ್ಯೆಯನ್ನು ನಮೂದಿಸಿದಾಗ ಓಟಿಪಿ ಸಂಖ್ಯೆಯು ಅವರ ಮೊಬೈಲಿಗೆ ಸಂದೇಶ ಬರುವುದು, ಸದರಿ ಓಟಿಪಿ ಸಂಖ್ಯೆಯನ್ನು ನಮೂದಿಸಿದಾಗ ಅರ್ಜಿದಾರರು ಬಯಸಿದ ಸೇವೆಯ ಅರ್ಜಿಯ ಪುಟ ಅನಾವರಣಗೊಳ್ಳುವುದು
4. ಮನವಿದಾರರು ಸದರಿ ಅರ್ಜಿಯಲ್ಲಿ ಕೋರಿರುವ ಎಲ್ಲಾ ಮಾಹಿತಿಗಳನ್ನು ಸಂಬಂಧಿಸಿದ ಕಂಡಿಕೆಯಲ್ಲಿ ತುಂಬುವುದು ನಂತರ ಉಳಿಸು ಎಂಬುದನ್ನು ಕ್ಲಿಕ್ ಮಾಡುವುದು
5. ಅರ್ಜಿ ಸಲ್ಲಿಸಿದ ನಂತರ ಒಂದು ಸ್ವೀಕೃತಿ ಸಂಖ್ಯೆಯು ಸಿಗುತ್ತದೆ
6. ಅರ್ಜಿಯು ವಿಷಯನಿರ್ವಾಹಕರಿಗೆ ಹೋಗುತ್ತದೆ. ನಂತರ ವಿಷಯ ನಿರ್ವಾಹಕರು ದಾಖಲೆಗಳೊಂದಿಗೆ ಅರ್ಜಿದಾರರ ಎಲ್ಲಾ ವಿವರಗಳನ್ನು ಪರಿಶೀಲಿಸುವರು
7. ಕೇಸ್ ವರ್ಕರ್ ದಾಖಲೆಗಳೊಂದಿಗೆ ಅರ್ಜಿದಾರರ ಎಲ್ಲಾ ವಿವರಗಳನ್ನು ಪರಿಶೀಲಿಸಲು
8. ವಿಷಯ ನಿರ್ವಾಹಕರು ಅರ್ಜಿಗಳನ್ನು ಪರಿಶೀಲಿಸಿ, ಅಭಿಪ್ರಾಯದೊಂದಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳಿಗೆ ಸಲ್ಲಿಸುತ್ತಾರೆ
9. DDWO ಎಲ್ಲಾ ವಿವರಗಳನ್ನು ನಿಯಮಾನುಸಾರ ಪರಿಶೀಲಿಸಿ, ಸರಿಯಾಗಿದ್ದರೆ, ಒಪ್ಪಿಗೆ ಸೂಚಿಸುತ್ತಾರೆ
10. ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, ಅರ್ಜಿಗಳನ್ನು ಪರಿಶೀಲಿಸಿ ಮಂಜೂರಾತಿಗಾಗಿ ಉಪನಿರ್ದೇಶಕರು, ಮಮಅಇ ಇವರಿಗೆ ಸಲ್ಲಿಸುವರು.
11. ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಖಜಾನೆಯಿಂದ ನೇರವಾಗಿ ಹಣವನ್ನು ಜಮಾ ಮಾಡಲಾಗುವುದು.